ಸೋಮವಾರ, 27 ನೇ ಮಾರ್ಚ್ 2023 / 06 ನೇ ಚೈತ್ರ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಹರದನಹಳ್ಳಿ ಕೆ ವಿ ಕೆ (ಚಾಮರಾಜನಗರ ಜಿಲ್ಲೆ) 2 ; ಚಾಮರಾಜನಗರ 1.
ಉಷ್ಣಾಂಶಗಳ ಸಾರಾಂಶ: ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.1 ಡಿ.ಸೆ. ಕಲಬುರ್ಗಿಯಲ್ಲಿ ದಾಖಲಾಗಿದೆ. ರಾಜ್ಯದಲ್ಲಿ ಅತೀ ಕನಿಷ್ಠ ಉಷ್ಣಾಂಶ 14.0 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.
29 ನೇ ಮಾರ್ಚ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿಯೂ ರಾಜ್ಯದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ: ಇಲ್ಲ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ:
ಮುಂದಿನ 48 ಗಂಟೆಗಳಲ್ಲಿ : ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಕನಿಷ್ಠ ಉಷ್ಣಾಂಶದ ಎಚ್ಚರಿಕೆ:
ಮುಂದಿನ 24 ಗಂಟೆಗಳಲ್ಲಿ : ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ : ಕನಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.