ಗುರುವಾರ, 01ನೇ ಡಿಸೆಂಬರ್ 2022 / 10 ನೇ ಅಗ್ರಹಾಯಣ 1944 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಣಹವೆ ಇತ್ತು. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ ನಲ್ಲಿ): ಇಲ್ಲ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 9.8 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.
03 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಕನಿಷ್ಠ ತಾಪಮಾನದ ಎಚ್ಚರಿಕೆ: ಮುಂದಿನ 48 ಘಂಟೆಗಳ ಅವಧಿಯಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ ಇರುವ ಸಾಧ್ಯತೆ ಇದೆ.
ಗುಡುಗು ಮುನ್ಸೂಚನೆ : ಮುಂದಿನ 48 ಘಂಟೆಗಳಲ್ಲಿ : ಇಲ್ಲ. ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.
ಬೆಂಗಳೂರು ಹವಾಮಾನ ವರದಿ:
03 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು/ದಟ್ಟ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.