ರಾಷ್ಟ್ರದ ಖ್ಯಾತ ಕೃಷಿ ವಿಜ್ಞಾನಿ ಜೊತೆಗೆ ಹಸಿರು ಕ್ರಾಂತಿಯ ಮುಂಚೂಣಿಯಲ್ಲಿದ್ದ ಎಂ.ಎಸ್. ಸ್ವಾಮಿನಾಥನ್ ಅವರು ಇಂದು ತಮಿಳುನಾಡಿನ ಚೆನ್ನೈಯಲ್ಲಿ ನಿಧನರಾಗಿದ್ದಾರೆ. ಅವರಿಗೆ ೯೮ ವರ್ಷ ವಯಸ್ಸಾಗಿತ್ತು.
ಎಂ.ಎಸ್. ಸ್ವಾಮಿನಾಥನ್ ಕೃಷಿ ಸಂಶೋಧನಾ ಪ್ರತಿಷ್ಠಾನ ಸ್ಥಾಪಿಸಿದ್ದ ಅವರು ಈ ಮೂಲಕ ಹಲವು ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅಧಿಕ ಇಳುವರಿ ಗೋಧಿ ತಳಿಗಳನ್ನು ಅಭಿವೃದ್ಧಿಪಡಿಸುವಲ್ಲಿ ಈ ಸಂಸ್ಥೆ ಪಾತ್ರ ವಹಿಸಿತ್ತು.
ಎಂ.ಎಸ್. ಸ್ವಾಮಿನಾಥನ್ ಅವರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಡಾ. ಸೌಮ್ಯ ಸ್ವಾಮಿನಾಥನ್ ಅವರು ಎಂ.ಎಸ್. ಸ್ವಾಮಿನಾಥನ್ ಪ್ರತಿಷ್ಠಾನದ ಮುಖ್ಯಸ್ಥರಾಗಿದ್ದಾರೆ. ಡಾ. ಮಧುರಾ ಸ್ವಾಮಿನಾಥನ್ ಅವರು ಇಂಡಿಯನ್ ಸ್ಟಾಟಿಸ್ಟಿಕಲ್ ಇನ್ ಸ್ಟಿಟ್ಯೂಟ್ ನಲ್ಲಿಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದಾರೆ. ಡಾ. ನಿತ್ಯಾ ಸ್ವಾಮಿನಾಥನ್ ಅವರು ಈಸ್ಟ್ ಆಗ್ಲಿಯಾ ವಿಶ್ವವಿದ್ಯಾಲಯದಲ್ಲಿ ಜೆಂಡರ್ ಅನಾಲಿಸೀಸ್ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಅಧ್ಯಾಪಕರಾಗಿದ್ದಾರೆ.
































