ಹವಾಮಾನ ಮುನ್ಸೂಚನೆ: ಕರ್ನಾಟಕದ ಒಳನಾಡಿನಲ್ಲಿ ಮಳೆ

0

02ನೇ ನವೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:  ಮುಂದಿನ 24 ಘಂಟೆಗಳು : ದಕ್ಷಿಣ ಒಳನಾಡಿನ ಕೆಲವು  ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿ  ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ  ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:  ದಕ್ಷಿಣ ಒಳನಾಡಿನ ಹಲವು  ಕಡೆಗಳಲ್ಲಿ ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ  ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

ಗುಡುಗು ಮುನ್ಸೂಚನೆ : ಮುಂದಿನ 48 ಘಂಟೆಗಳಲ್ಲಿ  ಇಲ್ಲ

ಭಾರೀ ಮಳೆ ಮುನ್ನೆಚ್ಚರಿಕೆ: ಮುಂದಿನ 48 ಘಂಟೆಗಳಲ್ಲಿ  : ಇಲ್ಲ

ಮೀನುಗಾರರಿಗೆ ಎಚ್ಚರಿಕೆ:  ಇಲ್ಲ.

03 ನೇ ನವೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ   ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ.  ಗರಿಷ್ಠ ಉಷ್ಣಾಂಶ 27  ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ   ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ.  ಗರಿಷ್ಠ ಉಷ್ಣಾಂಶ 26  ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮಂಗಳವಾರ, 01 ನೇ ನವೆಂಬರ್ 2022 / 10 ನೇ, ಕಾರ್ತಿಕ 1944 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಣ ಹವೆ ಇತ್ತು.  ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 12.6 ಡಿ.ಸೆ. ಬಾಗಲಕೋಟೆಯಲ್ಲಿ   ದಾಖಲಾಗಿದೆ.

LEAVE A REPLY

Please enter your comment!
Please enter your name here