ನಾಡಿನ ಮಳೆ ಮುನ್ಸೂಚನೆ ವಿವರ

0

ಭಾನುವಾರ, 06 ನೇ  ಆಗಸ್ಟ್ 2023 / 15ನೇ  ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಆದರೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು.  ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):

 ಗೇರುಸೊಪ್ಪ (ಉತ್ತರ ಕನ್ನಡ ಜಿಲ್ಲೆ), ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ), ಶೃಂಗೇರಿ (ಚಿಕ್ಕಮಗಳೂರು ಜಿಲ್ಲೆ) ತಲಾ 5; ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ), ಜಯಪುರ (ಚಿಕ್ಕಮಗಳೂರು ಜಿಲ್ಲೆ) ತಲಾ 4; ಸಿದ್ದಾಪುರ (ಉಡುಪಿ ಜಿಲ್ಲೆ), ಸುಬ್ರಹ್ಮಣ್ಯ, ಧರ್ಮಸ್ಥಳ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ತಾಳಗುಪ್ಪ, ಲಿಂಗನಮಕ್ಕಿ (ಎರಡೂ ಶಿವಮೊಗ್ಗ ಜಿಲ್ಲೆ), ಕಳಸ (ಚಿಕ್ಕಮಗಳೂರು ಜಿಲ್ಲೆ), ಮಾಗಡಿ (ರಾಮನಗರ ಜಿಲ್ಲೆ), ಸೋಮವಾರಪೇಟೆ (ಕೊಡಗು ಜಿಲ್ಲೆ) ತಲಾ 3; ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಕಮ್ಮರಡಿ, ಬಾಳೆಹೊನ್ನೂರು, ಕೊಪ್ಪ, ಕೊಟ್ಟಿಗೆಹಾರ, ಎನ್ ಆರ್ ಪುರ (ಎಲ್ಲವೂ ಚಿಕ್ಕಮಗಳೂರು ಜಿಲ್ಲೆ) ತಲಾ 2; ಕುಂದಾಪುರ, ಕೋಟ, ಕೊಲ್ಲೂರು, ಕಾರ್ಕಳ (ಎಲ್ಲವೂ ಉಡುಪಿ ಜಿಲ್ಲೆ), ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಉಪ್ಪಿನಂಗಡಿ (ಎಲ್ಲವೂ ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ, ಮಂಕಿ, ಮಂಚಿಕೆರೆ, ಜೋಯಿಡಾ, ಕದ್ರಾ, ಶಿರಾಲಿ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಸಿಂಧನೂರು, ಜಾಲಹಳ್ಳಿ (ಎರಡೂ ರಾಯಚೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಚಂದೂರಾಯನಹಳ್ಳಿ ಕೆವಿಕೆ (ರಾಮನಗರ ಜಿಲ್ಲೆ) ತಲಾ 1.

08 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಬಿರುಗಾಳಿ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

08 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ.   ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ.   ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here