14 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ

0

ಶನಿವಾರ , 12 ನೇ  ಆಗಸ್ಟ್ 2023 / 21ನೇ  ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ರಾಜ್ಯದಲ್ಲಿ  ದುರ್ಬಲವಾಗಿತ್ತು.  ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಬಸವನ ಬಾಗೇವಾಡಿ (ವಿಜಯಪುರ ಜಿಲ್ಲೆ) 5; ಪೊನ್ನಂಪೇಟೆ ಪಿ.ಡಬ್ಲೂ..ಡಿ (ಕೊಡಗು ಜಿಲ್ಲೆ) 4; ಗಬ್ಬುರು (ರಾಯಚೂರು ಜಿಲ್ಲೆ) 3; ಸುತ್ತೂರು ಎ.ಡಬ್ಲೂ.ಎಸ್ (ಮೈಸೂರು ಜಿಲ್ಲೆ), ಹರದನಹಳ್ಳಿ ಕೆ.ವಿ.ಕೆ (ಚಾಮರಾಜನಗರ ಜಿಲ್ಲೆ) ತಲಾ 2; ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ), ದೇವದುರ್ಗ (ರಾಯಚೂರು ಜಿಲ್ಲೆ), ಕಕ್ಕೆರಿ (ಯಾದಗಿರಿ ಜಿಲ್ಲೆ), ವಿಜಯಪುರ ,  ತಲಾ 1.

14 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು  ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.  ದಕ್ಷಿಣ ಒಳನಾಡಿನ ಒಂದೆರಡು  ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಗುಡುಗು ಮುನ್ನೆಚ್ಚರಿಕೆ:

ಮುಂದಿನ 48  ಘಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

14 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.   ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here