ಸೋಮವಾರ, 11 ನೇ ಸೆಪ್ಟೆಂಬರ್ 2023 / 20ನೇ ಭಾದ್ರಪದ 1945 ಶಕ: ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲವಾಗಿತ್ತು ಮತ್ತು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು.
ಕರಾವಳಿಯಲ್ಲಿ ವ್ಯಾಪಕವಾಗಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಕಾರ್ಕಳ (ಉಡುಪಿ ಜಿಲ್ಲೆ) 6; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಉಡುಪಿ ತಲಾ 5; ಮಾಣಿ, ಪುತ್ತೂರು (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಕುಂದಾಪುರ (ಉಡುಪಿ ಜಿಲ್ಲೆ) ತಲಾ 4; ಕೋಟ (ಉಡುಪಿ ಜಿಲ್ಲೆ), ಕುಮಟಾ, ಕ್ಯಾಸಲ್ ರಾಕ್ (ಎರಡೂ ಉತ್ತರ ಕನ್ನಡ ಜಿಲ್ಲೆ), ಔರಾದ್ (ಬೀದರ್ ಜಿಲ್ಲೆ) ತಲಾ 3; ಮಂಗಳೂರು, ಬೆಳ್ತಂಗಡಿ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಗೇರುಸೊಪ್ಪ, ಮಂಕಿ, ಗೋಕರ್ಣ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಫರ್ಹತಾಬಾದ್ (ಕಲಬುರ್ಗಿ ಜಿಲ್ಲೆ), ಲಿಂಗನಮಕ್ಕಿ, ತಾಳಗುಪ್ಪ (ಎರಡೂ ಶಿವಮೊಗ್ಗ ಜಿಲ್ಲೆ), ಶೃಂಗೇರಿ (ಚಿಕ್ಕಮಗಳೂರು ಜಿಲ್ಲೆ) ತಲಾ 2; ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮೂಲ್ಕಿ, ಉಪ್ಪಿನಂಗಡಿ, ಸುಳ್ಯ (ಎಲ್ಲಾ ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಶಿರಾಲಿ, ಹೊನ್ನಾವರ, ಕದ್ರಾ, ಸಿದ್ದಾಪುರ, ಬೇಲಿಕೇರಿ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಬೀದರ್, ಬೀದರ್ ಪಿಟಿಒ, ಆಳಂದ, ಚಿತ್ತಾಪುರ (ಎರಡೂ ಕಲಬುರ್ಗಿ ಜಿಲ್ಲೆ), ಝಲ್ಕಿ (ವಿಜಯಪುರ ಜಿಲ್ಲೆ), ಅಡಕಿ, ಮುಧೋಳೆ (ಎರಡೂ ಕಲಬುರ್ಗಿ ಜಿಲ್ಲೆ), ತ್ಯಾಗರ್ತಿ (ಶಿವಮೊಗ್ಗ ಜಿಲ್ಲೆ), ಕೊಟ್ಟಿಗೆಹಾರ, ಜಯಪುರ, ಕಮ್ಮರಡಿ, ಕೊಪ್ಪ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಮಡಿಕೇರಿ ಎಡಬ್ಲ್ಯೂಎಸ್, ಗೋಣಿಕೊಪ್ಪಲು ಕೆವಿಕೆ (ಕೊಡಗು ಜಿಲ್ಲೆ) ತಲಾ 1.
13 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: . ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ.
ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
13 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.