12 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಮತ್ತು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ; ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉಷ್ಣಾಂಶಗಳ ಎಚ್ಚರಿಕೆ: ಮುಂದಿನ 48 ಘಂಟೆಗಳು:
ಗರಿಷ್ಠ ಉಷ್ಣಾಂಶಗಳು :
ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳನಲ್ಲಿ ಜಿಲ್ಲೆಗಳ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ ; ದಕ್ಷಿಣ ಒಳನಾಡಿನಲ್ಲಿ ಮಂಡ್ಯ, ಹಾಸನ, ಚಿತ್ರದುರ್ಗ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮತ್ತು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು:ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.