ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡು ಕೆಲವೆಡೆ ಮಳೆ ಸಾಧ್ಯತೆ

0

ಗುರುವಾರ, 02ನೇ ನವೆಂಬರ್ 2023 /10 ನೇ ಕಾರ್ತಿಕ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಮಾನ್ವಿ (ರಾಯಚೂರು ಜಿಲ್ಲೆ), ಸಾಲಿಗ್ರಾಮ (ಮೈಸೂರು ಜಿಲ್ಲೆ) ತಲಾ 4.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 16.6 ಡಿ.ಸೆ. ವಿಜಯಪುರ ದಲ್ಲಿ ದಾಖಲಾಗಿದೆ.

4 ನವೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ಮುಂದಿನ 48 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ತಾಪಮಾನ ಎಚ್ಚರಿಕೆ:
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು :

ಮುಂದಿನ 24 ಘಂಟೆಗಳು: ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು:
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯದಾದ್ಯಂತ ಹಲವು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿ ಹಾಗು ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ;
ಮೀನುಗಾರರಿಗೆ ಎಚ್ಚರಿಕೆ: ಇಲ್ಲ

4ನೇ ನವೆಂಬರ್ 2023 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

LEAVE A REPLY

Please enter your comment!
Please enter your name here