ಇಂದು ರಾಜ್ಯದ ಬಹುತೇಕ ಕಡೆ ಮಳೆ ಸಾಧ್ಯತೆ

0

ಭಾನುವಾರ , 18  ನೇ  ಜೂನ್ 2023 / 28 ನೇ  ಜ್ಯೈಷ್ಠಾ 1945 ಶಕಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ಕರಾವಳಿಯ ಬಹುತೇಕ  ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಅತಿ ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ ) 12.

ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ ) 10.

ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಮುಲ್ಕಿ, ಉಪ್ಪಿನಂಗಡಿ (ಎರಡೂ ದಕ್ಷಿಣ ಕನ್ನಡ), ಮಂಕಿ (ಉತ್ತರ ಕನ್ನಡ ಜಿಲ್ಲೆ ) ತಲಾ 6; ಹೊನ್ನಾವರ , ಕುಮಟ,  ಕಾರವಾರ, ಕದ್ರಾ (ಎಲ್ಲಾ ಉತ್ತರ ಕನ್ನಡ ಜಿಲ್ಲೆ) ತಲಾ 4; ಮಾಣಿ (ದಕ್ಷಿಣ ಕನ್ನಡ ಜಿಲ್ಲೆ ), ಕ್ಯಾಸಲ್ ರಾಕ್, ಶಿರಾಳಿ, ಗೋಕರ್ಣ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ ), ಕೋಟ (ಉಡುಪಿ ಜಿಲ್ಲೆ ), ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ ), ಸಿಂಧನೂರು (ರಾಯಚೂರು ಜಿಲ್ಲೆ ) ತಲಾ 3; ಗೇರುಸೊಪ್ಪ (ಉತ್ತರ ಕನ್ನಡ ಜಿಲ್ಲೆ), ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ ), ಕೊಲ್ಲೂರು (ಉಡುಪಿ), ಭಾಗಮಂಡಲ (ಕೊಡಗು) ತಲಾ 2; ಉಡುಪಿ, ಕುಂದಾಪುರ, ಕಾರ್ಕಳ, ಸಿದ್ದಾಪುರ (ಎಲ್ಲಾ ಉಡುಪಿ ಜಿಲ್ಲೆ ) , ಅಂಕೋಲಾ (ಉತ್ತರ ಕನ್ನಡ ಜಿಲ್ಲೆ ) , ಧರ್ಮಸ್ಥಳ, ಪುತ್ತೂರು ಎಚ್‌ಎಂಎಸ್ (ಎರಡೂ ದಕ್ಷಿಣ ಕನ್ನಡ ಜಿಲ್ಲೆ ) ತಲಾ 1.

ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.1  ಡಿಗ್ರಿ ಸೆಲ್ಷಿಯಸ್  ಕಲಬುರ್ಗಿಯಲ್ಲಿ ದಾಖಲಾಗಿದೆ.

20 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳಲ್ಲಿ  ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು  ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳಲ್ಲಿ  ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು  ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ  ಗುಡುಗು ಮಿಂಚಿನ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:

ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದ ಒಂದೆರಡು ಕಡೆಗಳಲ್ಲಿ 4-5  ಹಾಗೂ ಕೆಲವು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಷಿಯಸ್ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

20 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ  ಮೋಡ ಕವಿದ ವಾತಾವರಣವಿರುತ್ತದೆ.  ಸಂಜೆ ಅಥವ  ರಾತ್ರಿಯ ವೇಳೆಗೆ ಹಗುರದಿಂದ ಸಾದಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ  ಮೋಡ ಕವಿದ ವಾತಾವರಣವಿರುತ್ತದೆ.  ಸಂಜೆ ಅಥವ  ರಾತ್ರಿಯ ವೇಳೆಗೆ ಹಗುರದಿಂದ ಸಾದಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here