ಶುಕ್ರವಾರ, 08 ನೇ ಸೆಪ್ಟೆಂಬರ್ 2023 / 17ನೇ ಭಾದ್ರಪದ 1945 ಶಕ: ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ) , ಭಾಗಮಂಡಲ (ಕೊಡಗು ಜಿಲ್ಲೆ) ತಲಾ 6; ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ) 5; ಮಾಣಿ, ಧರ್ಮಸ್ಥಳ, ಪುತ್ತೂರು ಎಚ್‌ಎಂಎಸ್, ಮಂಗಳೂರು (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ) , ಕುಂದಾಪುರ (ಉಡುಪಿ ಜಿಲ್ಲೆ), ಗೋಕರ್ಣ (ಉತ್ತರ ಕನ್ನಡ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) , ನಾಪೋಕ್ಲು (ಕೊಡಗು ಜಿಲ್ಲೆ) ತಲಾ 4; ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ), ಕಾರ್ಕಳ (ಉಡುಪಿ ಜಿಲ್ಲೆ), ಉಡುಪಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 3; ಕ್ಯಾಸಲ್ ರಾಕ್, ಗೇರುಸೊಪ್ಪ , ಶಿರಾಲಿ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ) ,ವಿರಾಜಪೇಟೆ, ಪೊನ್ನಂಪೇಟೆ ಪಿಡಬ್ಲ್ಯೂಡಿ (ಎರಡೂ ಕೊಡಗು ಜಿಲ್ಲೆ) , ಕೊಟ್ಟಿಗೆಹಾರ , ಶೃಂಗೇರಿ ಎಚ್‌ಎಂಎಸ್ (ಎರಡೂ ಚಿಕ್ಕಮಗಳೂರು ಜಿಲ್ಲೆ) , ಬಂಡೀಪುರ (ಚಾಮರಾಜನಗರ ಜಿಲ್ಲೆ), ಹುಂಚಡಕಟ್ಟೆ (ಶಿವಮೊಗ್ಗ ಜಿಲ್ಲೆ) ತಲಾ 2; ಉಪ್ಪಿನಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಮಂಕಿ, ಯಲ್ಲಾಪುರ, ಜೋಯಿಡಾ, ಅಂಕೋಲಾ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ) , ಕೋಟ, ಕೊಲ್ಲೂರು (ಎರಡೂ ಉಡುಪಿ ಜಿಲ್ಲೆ) , ಸಿಂದಗಿ (ವಿಜಯಪುರ ಜಿಲ್ಲೆ) , ಕೆಂಭಾವಿ (ಯಾದಗಿರಿ ಜಿಲ್ಲೆ), ಕೃಷ್ಣರಾಜಸಾಗರ (ಮಂಡ್ಯ ಜಿಲ್ಲೆ) ಕುಣಿಗಲ್ (ತುಮಕೂರು ಜಿಲ್ಲೆ), ಜಯಪುರ, ಕಮ್ಮರಡಿ, ಬಾಳೆಹೊನ್ನೂರು, ಕಳಸ (ಎಲ್ಲವೂ ಚಿಕ್ಕಮಗಳೂರು ಜಿಲ್ಲೆ), ದೊಡ್ಡಬಳ್ಳಾಪುರ, ದೇವನಹಳ್ಳಿ (ಎರಡೂ ಬೆಂಗಳೂರು ಗ್ರಾಮಾಂತರ ಜಿಲ್ಲೆ), ಎಲೆಕ್ಟ್ರಾನಿಕ್ ಸಿಟಿ ARG (ಬೆಂಗಳೂರು ನಗರ ಜಿಲ್ಲೆ) , ಲಿಂಗನಮಕ್ಕಿ ಎಚ್‌ಎಂಎಸ್ (ಶಿವಮೊಗ್ಗ ಜಿಲ್ಲೆ) ತಲಾ 1
10 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
10 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
































