ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡುನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ

0

ಶನಿವಾರ, 04ನೇ ನವೆಂಬರ್ 2023 /12 ನೇ ಕಾರ್ತಿಕ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 18.6 ಡಿ.ಸೆ. ವಿಜಯಪುರ ದಲ್ಲಿ ದಾಖಲಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):

ಭಾಗಮಂಡಲ (ಕೊಡಗು ಜಿಲ್ಲೆ) 4; ಹಾರಂಗಿ (ಕೊಡಗು ಜಿಲ್ಲೆ), ಸಾಲಿಗ್ರಾಮ (ಮೈಸೂರು ಜಿಲ್ಲೆ) ತಲಾ 3; ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ), ಮಡಿಕೇರಿ (ಕೊಡಗು ಜಿಲ್ಲೆ), ಸರಗೂರು (ಮೈಸೂರು ಜಿಲ್ಲೆ) ತಲಾ 2; ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಮೂರ್ನಾಡು, ನಾಪೋಕ್ಲು, ವಿರಾಜಪೇಟೆ (ಎಲ್ಲಾ ಕೊಡಗು ಜಿಲ್ಲೆ) ತಲಾ 1.

6 ನವೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ಮುಂದಿನ 48 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರಿ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ;
ತಾಪಮಾನ ಎಚ್ಚರಿಕೆ:
ಉಷ್ಣಾಂಶಗಳ ಎಚ್ಚರಿಕೆ: ಇಲ್ಲ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ

6 ನೇ ನವೆಂಬರ್ 2023 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

LEAVE A REPLY

Please enter your comment!
Please enter your name here