ರಾಜ್ಯದ ಎಲ್ಲೆಲ್ಲಿ ಮಳೆ ಸಾಧ್ಯತೆ ವಿವರ

0

10 ನೇ ಆಗಸ್ಟ್ 2023/ 19ನೇ ಶ್ರಾವಣ 1945 ಶಕ 0830 ಗಂಟೆಗಳಲ್ಲಿ ದಾಖಲಾದ ವೀಕ್ಷಣೆಯ ಸಾರಾಂಶ. ಗುರುವಾರ, 10 ನೇ  ಆಗಸ್ಟ್ 2023 / 19ನೇ  ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು.  ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಟಿ.ನರಸೀಪುರ (ಮೈಸೂರು ಜಿಲ್ಲೆ) 5; ಬಳ್ಳಾರಿ 3; ಉಪ್ಪಿನಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಕೋಟ (ಉಡುಪಿ ಜಿಲ್ಲೆ), ಕೆಂಭಾವಿ (ಯಾದಗಿರಿ ಜಿಲ್ಲೆ), ಕುರ್ಡಿ (ರಾಯಚೂರು ಜಿಲ್ಲೆ), ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ), ಕೆ‌.ಆರ್.ಸಾಗರ (ಮಂಡ್ಯ ಜಿಲ್ಲೆ), ಕುರುಗೋಡು (ಬಳ್ಳಾರಿ ಜಿಲ್ಲೆ), ಕೂಡ್ಲಿಗಿ (ವಿಜಯನಗರ ಜಿಲ್ಲೆ) ತಲಾ 2;  ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ), ಕದ್ರಾ, ಯಲ್ಲಾಪುರ (ಎರಡೂ ಉತ್ತರ ಕನ್ನಡ ಜಿಲ್ಲೆ), ಬೈಲಹೊಂಗಲ (ಬೆಳಗಾವಿ ಜಿಲ್ಲೆ), ಅಣ್ಣಿಗೇರಿ (ಧಾರವಾಡ ಜಿಲ್ಲೆ), ಗದಗ್ , ಕಕ್ಕೇರಿ (ಯಾದಗಿರಿ ಜಿಲ್ಲೆ), ಹಾಸನ, ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ), ಮಳವಳ್ಳಿ (ಮಂಡ್ಯ ಜಿಲ್ಲೆ), ಹೊಸಪೇಟೆ, ಹಡಗಲಿ (ಎರಡೂ ವಿಜಯನಗರ ಜಿಲ್ಲೆ), ಮಂಡ್ಯ ಕೆವಿಕೆ ತಲಾ 1.

12 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಗುಡುಗು /ಬಿರುಗಾಳಿ ಮುನ್ನೆಚ್ಚರಿಕೆ:

ಮುಂದಿನ 24  ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:  ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

12 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.   ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21   ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.   ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21   ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here