ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ

0

ಮಂಗಳವಾರ, 31ನೇ ಅಕ್ಟೋಬರ್ 2023 /08 ನೇ ಕಾರ್ತಿಕ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಕರಾವಳಿಯ ಹಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):

ಮಾಣಿ (ದಕ್ಷಿಣ ಕನ್ನಡ ಜಿಲ್ಲೆ), ತ್ಯಾಗರ್ತಿ (ಶಿವಮೊಗ್ಗ ಜಿಲ್ಲೆ) ತಲಾ 5; ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 4; ಬೆಳಗಾವಿ ನಗರ 3; ಸುಳ್ಯ, ಪುತ್ತೂರು, ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಹೊಸದುರ್ಗ (ಚಿತ್ರದುರ್ಗ ಜಿಲ್ಲೆ), ಎನ್.ಆರ್.ಪುರ, ಶೃಂಗೇರಿ, ಯಗಟಿ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ) ತಲಾ 2; ಬನವಾಸಿ, ಕುಮಟಾ (ಎರಡೂ ಉತ್ತರ ಕನ್ನಡ ಜಿಲ್ಲೆ), ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ (ಉಡುಪಿ ಜಿಲ್ಲೆ), ಅಕ್ಕಿಆಲೂರು (ಹಾವೇರಿ ಜಿಲ್ಲೆ), ಕಟ್ಕೋಲ್, ಬೈಲಹೊಂಗಲ (ಎರಡೂ ಬೆಳಗಾವಿ ಜಿಲ್ಲೆ), ಚಿಕ್ಕಮಗಳೂರು, ಕೊಟ್ಟಿಗೆಹಾರ ಕಡೂರು, ಜಯಪುರ, ತರೀಕೆರೆ, ಕೊಪ್ಪ, ಕಳಸ, ಅಜ್ಜಂಪುರ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಮಾಗಡಿ (ರಾಮನಗರ ಜಿಲ್ಲೆ), ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ) ತಲಾ 1

ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 34.0 ಡಿ.ಸೆ ಕಾರವಾರದಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 16.2 ಡಿ.ಸೆ. ವಿ ಬೀದರ್ನಲ್ಲಿ ದಾಖಲಾಗಿದೆ.

2 ನವೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ಮುಂದಿನ 48 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ತಾಪಮಾನ ಎಚ್ಚರಿಕೆ:
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು : ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 -3 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗುವ ಸಾಧ್ಯತೆಯಿದೆ

ಕನಿಷ್ಠ ಉಷ್ಣಾಂಶಗಳು: ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ;
ಮೀನುಗಾರರಿಗೆ ಎಚ್ಚರಿಕೆ: ಇಲ್ಲ

2 ನವೆಂಬರ್ 2023 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆ/ಗುಡುಗು ಸಹಿತ ಸಂಜೆ/ರಾತ್ರಿಯ ಸಮಯದಲ್ಲಿ ಬಹಳಷ್ಟು ಸಾಧ್ಯತೆ ಇರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ .ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

LEAVE A REPLY

Please enter your comment!
Please enter your name here