ಕೃಷಿ ಕ್ಷೇತ್ರದಲ್ಲಿ ನ್ಯಾನೋ ಯೂರಿಯಾ ಕ್ರಾಂತಿಯನ್ನು ಉಂಟುಮಾಡಿದ್ದು,ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನಲ್ಲಿದೆ. ಅಧ್ಯಯನ ಮಾಡಿ ರೈತರಿಗೂ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಹಾಗೂ ಬೆಂಬಲವಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು.
ಅವರಿಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನೈಸರ್ಗಿಕ ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತು ನಡೆದ ವಿಡಿಯೊ ಸಂವಾದದಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡು ಮಾತನಾಡಿದರು.
ಡಿಜಿಟಲ್ ತಂತ್ರಜ್ಞಾನದ ಮೂಲಕ ರೈತರೇ ತಮ್ಮ ಭೂಮಿಯ ಸಮೀಕ್ಷೆ ಮಾಡುತ್ತಿದ್ದಾರೆ. ಈವರೆಗೆ 212 ಕೋಟಿ ಭೂ ಪ್ರದೇಶವನ್ನು ಡಿಜಿಟಲೀಕರಣಗೊಳಿಸಲಾಗಿದೆ. ಬೆಳೆ ಸಮೀಕ್ಷೆಯನ್ನು ರೈತರೇ ಮಾಡುತ್ತಿದ್ದಾರೆ. 212 ಕೋಟಿ ಪೈಕಿ16,584 ಬೆಳೆ ಗಳನ್ನು ರೈತರೇ ಸಮೀಕ್ಷೆ ಮಾಡಿದ್ದಾರೆ.
1.61ಕೋಟಿ ಪ್ರದೇಶವನ್ನು ಇಲಾಖೆ ಮಾಡಿದೆ. ಯಾವುದೇ ವ್ಯಾಜ್ಯಕ್ಕೆ ಎಡೆ ಮಾಡಿಕೊಡದಿರಲು ಶೇ 100 ರಷ್ಟು ರೈತರೇ ಸಮೀಕ್ಷೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು. ರೈತರು ಅತ್ಯಂತ ಪ್ರಾಮಾಣಿಕವಾಗಿ ಇದನ್ನು ನಡೆಸಿದ್ದಾರೆ ಎಂದು ತಿಳಿಸಿದರು.