ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲ

0
ಚಿತ್ರದ ಛಾಯಾಗ್ರಹಕರು: ಡಾ. ಅಶೋಕ್ ಕೆ.ಆರ್

ಮಂಗಳವಾರ, 27 ನೇ ಜೂನ್ 2023 / 06 ನೇ ಆಷಾಢ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ; ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಬಸವಕಲ್ಯಾಣ (ಬೀದರ್ ಜಿಲ್ಲೆ) 5; ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಕೋಟ, ಕುಂದಾಪುರ (ಎರಡೂ ಉಡುಪಿ ಜಿಲ್ಲೆ), ಅಂಕೋಲಾ, ಕ್ಯಾಸಲ್ ರಾಕ್ (ಎರಡೂ ಉತ್ತರ ಕನ್ನಡ ಜಿಲ್ಲೆ), ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) ತಲಾ 3; ಉಡುಪಿ, ಕಾರ್ಕಳ (ಉಡುಪಿ ಜಿಲ್ಲೆ), ಕಾರವಾರ, ಗುಂಜಿ (ಬೆಳಗಾವಿ ಜಿಲ್ಲೆ) ತಲಾ 2; ಧರ್ಮಸ್ಥಳ, ಪುತ್ತೂರು, ಸುಬ್ರಹ್ಮಣ್ಯ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಹೊನ್ನಾವರ, ಗೋಕರ್ಣ, ಬೇಲಿಕೇರಿ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ಕಲ್ಘಟಗಿ (ಧಾರವಾಡ ಜಿಲ್ಲೆ), ಭಾಲ್ಕಿ, ರಾಜೇಶ್ವರ, ಹಲಬರ್ಗಾ, ನಿಟ್ಟೂರು, ನಿರ್ಣಾ (ಎಲ್ಲ ಬೀದರ್ ಜಿಲ್ಲೆ), ಕಳಸ (ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 1.

29 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

29 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here