ದಕ್ಷಿಣ ಒಳನಾಡಿನಲ್ಲಿ ಬೇಸಿಗೆ ಮಳೆ ಸಾಧ್ಯತೆ

0

ಮಂಗಳವಾರ, 04 ನೇ ಏಪ್ರಿಲ್ 2023 / 14 ನೇ ಚೈತ್ರ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಭಾರೀ ಮಳೆಯ ಪ್ರಮಾಣ (ಸೆಂ.ಮೀನಲ್ಲಿ) : ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ) 9. ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಟಿ ನರಸೀಪುರ (ಮೈಸೂರು ಜಿಲ್ಲೆ) 2; ಚಾಮರಾಜನಗರ, ಬಂಡೀಪುರ (ಚಾಮರಾಜನಗರ ಜಿಲ್ಲೆ) ತಲಾ 1.
ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.2 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

06 ನೇ ಏಪ್ರಿಲ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ. ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here