ರಾಜ್ಯದ ಕೆಲವೆಡೆ  ಉಷ್ಣಾಂಶ ಹೆಚ್ಚಳ ಸಾಧ್ಯತೆ

0

ಶನಿವಾರ , 17  ನೇ  ಜೂನ್ 2023 / 27 ನೇ  ಜ್ಯೈಷ್ಠಾ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ ) 3; ಸಿದ್ದಾಪುರ (ಉಡುಪಿ ಜಿಲ್ಲೆ ) , ಕದ್ರಾ (ಉತ್ತರ ಕನ್ನಡ ಜಿಲ್ಲೆ ) ತಲಾ 2; ಕೊಲ್ಲೂರು (ಉಡುಪಿ ಜಿಲ್ಲೆ) 1. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.4  ಡಿಗ್ರಿ ಸೆಲ್ಷಿಯಸ್  ರಾಯಚೂರಿನಲ್ಲಿ ದಾಖಲಾಗಿದೆ.

19 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು:  ಕರಾವಳಿಯ ಕೆಲವು  ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು  ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಭಾರೀ ಮಳೆ ಮುನ್ನೆಚ್ಚರಿಕೆ  ಮುಂದಿನ 48 ಘಂಟೆಗಳಲ್ಲಿ ಇಲ್ಲ.

ಗುಡುಗು ಮುನ್ನೆಚ್ಚರಿಕೆ:  ಮುಂದಿನ 24 ಘಂಟೆಗಳಲ್ಲಿ  ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳಲ್ಲಿ  ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ: ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

19 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ  ಮೋಡ ಕವಿದ ವಾತಾವರಣವಿರುತ್ತದೆ.  ಸಂಜೆ ಅಥವ  ರಾತ್ರಿಯ ವೇಳೆಗೆ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ  ಮೋಡ ಕವಿದ ವಾತಾವರಣವಿರುತ್ತದೆ.  ಸಂಜೆ ಅಥವ  ರಾತ್ರಿಯ ವೇಳೆಗೆ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here