ಸೋಮವಾರ, 03 ನೇ ಏಪ್ರಿಲ್ 2023 / 13 ನೇ ಚೈತ್ರ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಣಹವೆ ಇತ್ತು. ಮುಖ್ಯ ಮಳೆಯ ಪ್ರ(ಸೆಂ.ಮೀನಲ್ಲಿ): ಇಲ್ಲ ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.4 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
05 ನೇ ಏಪ್ರಿಲ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮೀನುಗಾರರಿಗೆ ಎಚ್ಚರಿಕೆ: ಇಲ್ಲ. ಮುಂದಿನ 24 ಘಂಟೆಗಳ ಹೊರನೋಟದಲ್ರಾಲಿ ಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.