ಭಾನುವಾರ, 07 ನೇ ಮೇ 2023 / 17 ನೇ ವೈಶಾಖ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣ ಹವೆ ಇತ್ತು.
ಭಾರೀ ಮಳೆಯ ಪ್ರಮಾಣ (ಸೆಂ. ನಲ್ಲಿ): ಹುಣಸೂರು (ಮೈಸೂರು ಜಿಲ್ಲೆ) 7 ಇತರ ಮುಖ್ಯ ಮಳೆ ಪ್ರಮಾಣಗಳು (ಸೆಂ. ನಲ್ಲಿ): ರಾಮನಗರ, ಹುಣಸೂರು (ಮೈಸೂರು ಜಿಲ್ಲೆ) 6; ಮಾಲೂರು (ಕೋಲಾರ ಜಿಲ್ಲೆ), ವೈ ಎನ್ ಹೊಸಕೋಟೆ (ತುಮಕೂರು ಜಿಲ್ಲೆ), ಕನಕಪುರ (ರಾಮನಗರ ಜಿಲ್ಲೆ) ತಲಾ 5; ರಾಯಚೂರು, ಸರಗೂರು (ಮೈಸೂರು ಜಿಲ್ಲೆ) , ಪರಶುರಾಂಪುರ (ಚಿತ್ರದುರ್ಗ ಜಿಲ್ಲೆ) , ಕೃಷ್ಣರಾಜಸಾಗರ (ಮಂಡ್ಯ ಜಿಲ್ಲೆ) ತಲಾ 4; ಸೈದಾಪುರ (ಯಾದಗಿರಿ ಜಿಲ್ಲೆ), ಹಾಸನ , ಕುಣಿಗಲ್ (ತುಮಕೂರು ಜಿಲ್ಲೆ), ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲಾ 3; ಖಜೂರಿ (ಕಲಬುರ್ಗಿ ಜಿಲ್ಲೆ) , ತಿರುಮಲ ನರಸೀಪುರ (ಮೈಸೂರು ಜಿಲ್ಲೆ), ಚಾಮರಾಜನಗರ, ಕೃಷ್ಣರಾಜಪೇಟೆ (ಮಂಡ್ಯ ಜಿಲ್ಲೆ), ಚಿತ್ರದುರ್ಗ ತಲಾ 2, ಬೀದರ್, ಬೀದರ್ PTO, ಗೋಣಿಕೊಪ್ಪಲು_ KVK (ಕೊಡಗು ಜಿಲ್ಲೆ) , ಹರದನಹಳ್ಳಿ _KVK (ಚಾಮರಾಜನಗರ ಜಿಲ್ಲೆ), ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ), ಚಿಕ್ಕನಹಳ್ಳಿ (ತುಮಕೂರು ಜಿಲ್ಲೆ), ಬೆಳ್ಳೂರು (ಮಂಡ್ಯ ಜಿಲ್ಲೆ), ಮೈಸೂರು ತಲಾ 1.
ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 37.0 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
09 ನೇ ಮೇ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗು ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್, ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ ಮುಂದಿನ 48 ಘಂಟೆಗಳು: ಇಲ್ಲ.
ಗುಡುಗು ಮುನ್ನೆಚ್ಚರಿಕೆ: ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
09 ನೇ ಮೇ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.