ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

0
ಚಿತ್ರದ ಛಾಯಾಗ್ರಹಕರು: ಡಾ. ಅಶೋಕ್ ಕೆ.ಆರ್

ಸೋಮವಾರ , 19 ನೇ ಜೂನ್ 2023 / 29 ನೇ ಜ್ಯೈಷ್ಠಾ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:
ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕಾರವಾರ (ಉತ್ತರ ಕನ್ನಡ ಜಿಲ್ಲೆ) 6; ಸಿ ಆರ್ ಪಟ್ನಾ (ಹಾಸನ ಜಿಲ್ಲೆ) 5; ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ) 4; ಶಿರಾಲಿ, ಮಂಕಿ, ಗೋಕರ್ಣ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಕೋಟ (ಉಡುಪಿ ಜಿಲ್ಲೆ), ಮಾಗಡಿ (ರಾಮನಗರ ಜಿಲ್ಲೆ) ತಲಾ 3; ಮಾಣಿ (ದಕ್ಷಿಣ ಕನ್ನಡ ಜಿಲ್ಲೆ), ಮುನಿರಾಬಾದ್ (ಕೊಪ್ಪಳ ಜಿಲ್ಲೆ), ಸಿರಾ (ತುಮಕೂರು ಜಿಲ್ಲೆ), ಅಗ್ರಹಾರ ಕೋಣಂದೂರು (ಶಿವಮೊಗ್ಗ ಜಿಲ್ಲೆ), ಬೆಳ್ಳೂರು (ಮಂಡ್ಯ ಜಿಲ್ಲೆ), ಕೂಡ್ಲಿಗಿ (ವಿಜಯನಗರ ಜಿಲ್ಲೆ), ಹೆಬ್ಬೂರು (ತುಮಕೂರು ಜಿಲ್ಲೆ) ತಲಾ 2; ಬೇಲಿಕೇರಿ, ಕುಮಟಾ (ಎರಡೂ ಉತ್ತರ ಕನ್ನಡ ಜಿಲ್ಲೆ), ಉಪ್ಪಿನಂಗಡಿ, ಮೂಲ್ಕಿ, ಮಂಗಳೂರು (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಉಡುಪಿ, ಗಂಗಾವತಿ ಏ‌ಆರ್‌ಜಿ, ಗಂಗಾವತಿ, ಯಲಬುರ್ಗಾ (ಎಲ್ಲ ಕೊಪ್ಪಳ ಜಿಲ್ಲೆ), ಇಂಡಿ (ವಿಜಯಪುರ ಜಿಲ್ಲೆ), ಜ್ಞಾನಭಾರತಿ ಕ್ಯಾಂಪಸ್ (ಬೆಂಗಳೂರು ನಗರ ಜಿಲ್ಲೆ), ಚನ್ನಗಿರಿ (ದಾವಣಗೆರೆ ಜಿಲ್ಲೆ), ಹೊಸಪೇಟೆ (ವಿಜಯನಗರ ಜಿಲ್ಲೆ), ಕಂಪ್ಲಿ (ಬಳ್ಳಾರಿ ಜಿಲ್ಲೆ), ಚಂದೂರಾಯನಹಳ್ಳಿ ಕೆವಿಕೆ (ರಾಮನಗರ ಜಿಲ್ಲೆ) ತಲಾ 1.

ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.4 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

21 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:
ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಷಿಯಸ್ ಹಾಗೂ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

21 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಚಿತ್ರದ ಛಾಯಾಗ್ರಹಕರು: ಡಾ. ಅಶೋಕ್ ಕೆ.ಆರ್

LEAVE A REPLY

Please enter your comment!
Please enter your name here