ಶುಕ್ರವಾರ, 24 ನೇ ಮಾರ್ಚ್ 2023 / 03 ನೇ ಚೈತ್ರ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜದಾದ್ಯಂತ ಒಣಹವೆ ಇತ್ತು. ಮುಖ್ಯ ಮಳೆ ಪ್ರಮಾಣ (ಸೆಂ.ಮೀನಲ್ಲಿ) ಇಲ್ಲ
ಉಷ್ಣಾಂಶಗಳ ಸಾರಾಂಶ: ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 36.6 o ಡಿ.ಸೆ. ಕಲ್ಬುರ್ಗಿ ಯಲ್ಲಿ ದಾಖಲಾಗಿದೆ. ರಾಜ್ಯದಲ್ಲಿ ಅತೀ ಕನಿಷ್ಠ ಉಷ್ಣಾಂಶ 14.6o ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.
26 ನೇ ಮಾರ್ಚ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಪಟ್ಟಣ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಕಡೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: : ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಪಟ್ಟಣ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಒಳನಾಡಿನ ಉಳಿದ ಕಡೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ: ಮುಂದಿನ 48 ಗಂಟೆಗಳಲ್ಲಿ : ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಷಿಯಸ್ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಕನಿಷ್ಠ ಉಷ್ಣಾಂಶದ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ : ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ : ಕನಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಎಚ್ಚರಿಕೆ ಇಲ್ಲ. ಮುಂದಿನ 24 ಘಂಟೆಗಳ ಹೊರನೋಟದಲ್ಲಿ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.