ಹವಾಮಾನ ಮುನ್ಸೂಚನೆ ; ತಾಪಮಾನ ಕನಿಷ್ಟಕ್ಕಿಂತ ಕಡಿಮೆಗೆ ಕುಸಿಯುವ ಎಚ್ಚರಿಕೆ

0
Cold Weather Ahead Road Warning Sign

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 09.6 ಡಿ.ಸೆ. ಬಾಗಲಕೋಟೆ ನಲ್ಲಿ ದಾಖಲಾಗಿದೆ.

09 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಕನಿಷ್ಠ ತಾಪಮಾನದ ಎಚ್ಚರಿಕೆ: ಮುಂದಿನ 48 ಘಂಟೆಗಳ ಅವಧಿಯಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆ ಇದೆ.

ಗುಡುಗು ಮುನ್ಸೂಚನೆ : ಮುಂದಿನ 48 ಘಂಟೆಗಳಲ್ಲಿ: ಇಲ್ಲ. ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

09 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: : ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು/ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here