ಬೆಂಗಳೂರು:ಅಕ್ಟೋಬರ್ ೧೪: ಇನ್ನೆರಡು ದಿನಗಳಲ್ಲಿ ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ ೧೬, ೧೭, ೨೦೨೩ ರಲ್ಲಿ ಸಹ್ಯಾದ್ರಿ ತಪ್ಪಲಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಭಾರಿ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಉತ್ತರ ಒಳನಾಡಿನ ಅಲ್ಲಲ್ಲಿ ಹಾಗೂ ಕರ್ನಾಟಕ ಕರಾವಳಿಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.