ಭಾನುವಾರ 22ನೇ ಅಕ್ಟೋಬರ್ 2023 /30ನೇ ಆಶ್ವೀಜ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಮಾಣಿ, ಪುತ್ತೂರು ಎಚ್‌ಎಂಎಸ್ (ದಕ್ಷಿಣ ಕನ್ನಡ ಜಿಲ್ಲೆ) ತಲಾ 4; ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ) 3; ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ) 2, ಉಪ್ಪಿನಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಪಣಂಬೂರು, ಮಾಲೂರು, ಕೋಲಾರ (ಎರಡೂ ಕೋಲಾರ ಜಿಲ್ಲೆ) ತಲಾ 1.
ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 36.6 ಡಿ.ಸೆ ಶಿರಾಳಿಯಲ್ಲಿ ದಾಖಲಾಗಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 17. 1ಡಿ.ಸೆ. ವಿಜಯಪುರ ಯಲ್ಲಿ ದಾಖಲಾಗಿದೆ.
24 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು : ಕರಾವಳಿಯ ಉತ್ತರ ಕನ್ನಡ ಜಿಲ್ಲೆ ಒಂದೆರಡು ಕಡೆಗಳಲ್ಲಿ; ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ; ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು & ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.
ಬಿರುಗಾಳಿಯ ಮುನ್ನೆಚ್ಚರಿಕೆ:ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
24 ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ