ಹವಾಮಾನ ಮುನ್ಸೂಚನೆ; ಕರ್ನಾಟಕದ ಅಲ್ಲಲ್ಲಿ ಮಳೆ ಸಾಧ್ಯತೆ

0

ಶನಿವಾರ 07 ನೇ ಅಕ್ಟೋಬರ್ 2023 /15 ನೇ ಆಶ್ವೀಜ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಜಯಪುರ (ಚಿಕ್ಕಮಗಳೂರು ಜಿಲ್ಲೆ) 5; ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) , ಕೊಣನೂರು (ಹಾಸನ ಜಿಲ್ಲೆ) ತಲಾ 4; ಗೇರುಸೊಪ್ಪ (ಉತ್ತರ ಕನ್ನಡ ಜಿಲ್ಲೆ) 2; ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) , ಸಿ ಆರ್ ಪಟ್ನ (ಹಾಸನ ಜಿಲ್ಲೆ) ತಲಾ 1

ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 36.4 ಡಿ.ಸೆ. ಚಿಕ್ಕನಹಳ್ಳಿಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 14.0 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.

09 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾದಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಉಷ್ಣಾಂಶ ಎಚ್ಚರಿಕೆ: ಇಲ್ಲ
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು:ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.
ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ

09ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಕೆಲವು ಕಡೆ ಹಗುರ ಮಳೆ ಯಾಗುವ ಸಾದ್ಯತೆ ಇದೆ. ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರುವ ಸಾದ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

LEAVE A REPLY

Please enter your comment!
Please enter your name here