ಗುರುವಾರ, 23ನೇ ನವೆಂಬರ್ 2023/ 2ನೇ ಅಗ್ರಹಾಯಣ, 1945 ಶಕ / ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.
ಮುಖ್ಯ ಮಳೆಯ ಪ್ರಮಾಣಗಳು (ಸೆಂ.ಮೀ ನಲ್ಲಿ): ತೊಂಡೇಭಾವಿ (ಚಿಕ್ಕಬಳ್ಳಾಪುರ ಜಿಲ್ಲೆ) 3; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಸೋಮವಾರಪೇಟೆ (ಕೊಡಗು ಜಿಲ್ಲೆ), ವಿರಾಜಪೇಟೆ (ಕೊಡಗು ಜಿಲ್ಲೆ), ಗೌರಿಬಿದನೂರು (ಚಿಕ್ಕಬಳ್ಳಾಪುರ ಜಿಲ್ಲೆ) ತಲಾ 2; ಅರಕಲಗೂಡು (ಹಾಸನ ಜಿಲ್ಲೆ), ಬಂಡೀಪುರ (ಚಾಮರಾಜನಗರ ಜಿಲ್ಲೆ), ಕೊಣನೂರು (ಹಾಸನ ಜಿಲ್ಲೆ), ಕುಣಿಗಲ್ (ತುಮಕೂರು ಜಿಲ್ಲೆ) ತಲಾ 1.
25 ನೇ ನವೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ: ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಭಾರಿ ಮಳೆ ಮುನ್ನೆಚ್ಚರಿಕೆ: ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ತಾಪಮಾನ ಎಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
25 ನೇ ನವೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.