ಬೆಂಗಳೂರು: ಅಕ್ಟೋಬರ್ 20: ನೈಋತ್ಯ ಮಾನ್ಸೂನ್ ಕರ್ನಾಟಕದ ಒಳಭಾಗದಲ್ಲಿ ಸಕ್ರಿಯವಾಗಿದೆ ಮತ್ತು ಕರಾವಳಿ ಕರ್ನಾಟಕದ ಮೇಲೆ ಸಾಮಾನ್ಯವಾಗಿದೆ.
ಮುಂದಿನ 24 ಗಂಟೆಗಳ ಮುನ್ಸೂಚನೆ: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ
ಭಾರೀ ಮಳೆಯ ಎಚ್ಚರಿಕೆ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದ ಪ್ರತ್ಯೇಕ ಸ್ಥಳಗಳಲ್ಲಿ, ರಾಮನಗರ ಮತ್ತು ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಿಡಿಲು ಉಂಟಾಗುವ ಸಾಧ್ಯತೆ ಇದೆ.