ಹವಾಮಾನ ವರದಿ: ಕರ್ನಾಟಕದ ಹಲವೆಡೆ ಮಳೆಯಾಗಿದೆ

0

ಸೋಮವಾರ, 30ನೇ ಅಕ್ಟೋಬರ್ 2023 /07 ನೇ ಕಾರ್ತಿಕ 1945 ಶಕ, ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಕೊಡಗು ಜಿಲ್ಲೆಯ ನಾಪೋಕ್ಲು, ತಾಳಗುಪ್ಪ (ಶಿವಮೊಗ್ಗ ಜಿಲ್ಲೆ ) ತಲಾ 5; ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ ), ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ) ತಲಾ 4; ಶಿರಾಲಿ, ಸಿದ್ದಾಪುರ (ಉಡುಪಿ ಜಿಲ್ಲೆ), ಎನ್.ಆರ್.ಪುರ (ಚಿಕ್ಕಮಗಳೂರು) ತಲಾ 3; ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ), ಹೊನ್ನಾವರ, ಮಡಿಕೇರಿ, ಮೂರ್ನಾಡು (ಕೊಡಗು ಜಿಲ್ಲೆ) ತಲಾ 2, ಶೃಂಗೇರಿ, ಕಳಸ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 2; ಉಪ್ಪಿನಂಗಡಿ, ಮಾಣಿ, ಸುಳ್ಯ, ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಉಡುಪಿ, ಕೋಟ (ಎರಡೂ ಉಡುಪಿ ಜಿಲ್ಲೆ), ಸಿದ್ದಾಪುರ, ಗೆರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ), ಜಯಪುರ (ಚಿಕ್ಕಮಗಳೂರು ಜಿಲ್ಲೆ), ಸೋಮವಾರಪೇಟೆ, ಭಾಗಮಂಡಲ ವಿರಾಜಪೇಟೆ (ಎಲ್ಲಾ ಕೊಡಗು ಜಿಲ್ಲೆ), ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಹುಣಸೂರು (ಮೈಸೂರು ಜಿಲ್ಲೆ) ತಲಾ 1

ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 36.5 ಡಿ.ಸೆ ಕಾರವಾರದಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 16.2 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

1 ನವೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ತಾಪಮಾನ ಎಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ;
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು : ರಾಜ್ಯದಾದ್ಯಂತ ಹಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 -3 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗುವ ಸಾಧ್ಯತೆಯಿದೆ

ಕನಿಷ್ಠ ಉಷ್ಣಾಂಶಗಳು: ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 -3 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗುವ ಸಾಧ್ಯತೆಯಿದೆ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ

1 ನವೆಂಬರ್ 2023 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 29ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

LEAVE A REPLY

Please enter your comment!
Please enter your name here