06 ನೇ ನವೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು : ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಕರಾವಳಿಯಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಕರಾವಳಿಯಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ. ಮುಂದಿನ 48 ಘಂಟೆಗಳಲ್ಲಿ ಕರಾವಳಿ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆ ಮುನ್ನೆಚ್ಚರಿಕೆ ಮುಂದಿನ 48 ಘಂಟೆಗಳಲ್ಲಿ : ಇಲ್ಲ. ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
06 ನೇ ನವೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ.ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.
ಶುಕ್ರವಾರ, 04 ನೇ ನವೆಂಬರ್ 2022 / 13 ನೇ, ಕಾರ್ತಿಕ 1944 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು.
ಮುಖ್ಯ ಮಳೆ ಪ್ರಮಾಣಗಳು (ಸೆಂ. ನಲ್ಲಿ): ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಬೆಂಗಳೂರು ನಗರ, ಪಾವಗಡ (ತುಮಕೂರು ಜಿಲ್ಲೆ ) ತಲಾ 1.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 15.3 ಡಿ.ಸೆ. ದಾವಣಗೆರೆಯಲ್ಲಿ ದಾಖಲಾಗಿದೆ.