ಹವಾಮಾನ ವರದಿ;19 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ಮಳೆ ಮುನ್ಸೂಚನೆ

0

ಗುರುವಾರ, 17 ನೇ ಆಗಸ್ಟ್ 2023 / 26ನೇ ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಮಂಗಳೂರು ವಿಮಾನ ನಿಲ್ದಾಣ, ಬಿ ಬಾಗೇವಾಡಿ, ತಾಳಿಕೋಟೆ (ಎರಡೂ ವಿಜಯಪುರ ಜಿಲ್ಲೆ), ನಿಪ್ಪಾಣಿ (ಬೆಳಗಾವಿ ಜಿಲ್ಲೆ) ತಲಾ 2; ಕಾರವಾರ, ಗೋಕರ್ಣ (ಉತ್ತರ ಕನ್ನಡ ಜಿಲ್ಲೆ), ವಿಜಯಪುರ, ಚಿಕ್ಕೋಡಿ, ಸಂಕೇಶ್ವರ (ಎರಡೂ ಬೆಳಗಾವಿ ಜಿಲ್ಲೆ) ತಲಾ 1.

19 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

19 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here